10th SEPTEMBER
- 8 ನಗರಗಳಲ್ಲಿ ಮಹಿಳಾ ಸುರಕ್ಷತೆಗೆ ವಿಶೇಷ ಯೋಜನೆ (Special plan for womens safety in 8 cities)
ವಿದ್ಯಾರ್ಥಿಗಳ ಗಮನಕ್ಕೆ
ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಾಗಿ– ಮಹಿಳೆಯರ ಮೇಲೆ ದೌರ್ಜನ್ಯ ವನ್ನು ತಡೆಯಲು ಕೇಂದ್ರ ಸರಕಾರದ ಕ್ರಮಗಳನ್ನು ವಿಶ್ಲೇಷಿಸಿ
ಪ್ರಮುಖ ಸುದ್ದಿ
- ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ 8 ಪ್ರಮುಖ ನಗರಗಳಲ್ಲಿ ನಾರಿಯರ ಸುರಕ್ಷತೆಗಾಗಿ ಕೇಂದ್ರ ಸರಕಾರ ವಿಶೇಷ ಯೋಜನೆ ಘೋಷಿಸಿದ್ದು, ಇದಕ್ಕಾಗಿ 3,000 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ.
ಮುಖ್ಯ ಅಂಶಗಳು
- ಬೆಂಗಳೂರು, ದಿಲ್ಲಿ, ಹೈದರಾಬಾದ್ ಒಳಗೊಂಡಂತೆ ಪ್ರಮುಖ ಎಂಟು ನಗರಗಳಲ್ಲಿ ಅಪಾಯದ ಕರೆಗಂಟೆ ಮತ್ತು ಸಂಪೂರ್ಣ ಮಹಿಳಾ ಗಸ್ತು ತಂಡಗಳ ರಚನೆಗೆ ಶೀಘ್ರವೇ ಚಾಲನೆ ದೊರೆಯಲಿದೆ. ಈ ಯೋಜನೆಗಾಗಿ ಅನುದಾನ ಬಿಡುಗಡೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.
ಏನೆಲ್ಲಾ ಕ್ರಮಗಳು ?
- ಮಹಿಳಾ ಸುರಕ್ಷ ತೆಗಾಗಿ ಸಾಧ್ಯವಿರುವ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತರುವುದು ಯೋಜನೆಯ ಉದ್ದೇಶ.
- ಅತಿ ಹೆಚ್ಚು ಅಪರಾಧ ಕೃತ್ಯಗಳು ನಡೆಯುವ ಪ್ರದೇಶಗಳಲ್ಲಿ ಸುರಕ್ಷಾ ವಲಯಗಳ ಸ್ಥಾಪನೆ, ಅತ್ಯಾಧುನಿಕ ನಿಯಂತ್ರಣ ಕೇಂದ್ರಗಳ ಜತೆ ಸಂಪರ್ಕ ಹೊಂದಿರುವ ಸಿ.ಸಿ.ಟಿ.ವಿ. ಕ್ಯಾಮೆರಾಗಳ ಅಳವಡಿಕೆ, ಭದ್ರತಾ ವ್ಯವಸ್ಥೆ ಇರುವ ಸಾರ್ವಜನಿಕ ಸಾರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಅಪಾಯ ಕರೆಗಂಟೆಗಳ ಅವಳಡಿಕೆ ಯೋಜನೆಯ ಭಾಗಗಳಾಗಿವೆ.
- ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳು ಆರಂಭಗೊಳ್ಳಲಿವೆ. ಅಲ್ಲಿ ಆಪ್ತಸಮಾಲೋಚಕರ ಸೇವೆಯೂ ದೊರಕಲಿದೆ. ಹೀಗಾಗಿ ಮಹಿಳೆಯರು ದೂರು ದಾಖಲಿಸುವುದು ಸುಲಭವಾಗಲಿದೆ ಮತ್ತು ಸಂಕಷ್ಟದ ಸಂದರ್ಭಗಳಲ್ಲಿ ಅವರಿಗೆ ವಿಶೇಷ ನೆರವು ದೊರೆಯಲಿದೆ.
- ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ನಗರಾಭಿವೃದ್ಧಿ ಸಚಿವಾಲಯ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಆಯಾ ನಗರಗಳ ಮಹಾನಗರಪಾಲಿಕೆ ಮತ್ತು ಪೊಲೀಸ್ ಆಯುಕ್ತರ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗಲಿದೆ. ಯೋಜನೆ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಭರಿಸಲಿವೆ.
- ಯೋಜನೆಯು 2018-19 ರಿಂದ 2020-21ರ ಅವಧಿಯಲ್ಲಿ ಅನುಷ್ಠಾನಗೊಳ್ಳಲಿದೆ. 2013ರಲ್ಲಿ ಸ್ಥಾಪಿಸಲಾದ ನಿರ್ಭಯಾ ನಿಧಿಯ ಅಡಿಯಲ್ಲಿ ಯೋಜನೆಯನ್ನು ಮಂಜೂರು ಮಾಡಲಾಗಿದೆ.
ಇತರ ಉಪಕ್ರಮಗಳು
- ಮಹಿಳೆಯರು ಮತ್ತು ಮಕ್ಕಳಿಗೆ ವಿಶ್ರಾಂತಿ ತಾಣಗಳು
- ಸ್ಮಾರ್ಟ್ ಎಲ್‌ಇಡಿ ಬೀದಿ ದೀಪಗಳು
- ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಿಕ್ಕಟ್ಟು ನಿರ್ವಹಣಾ ಕೇಂದ್ರಗಳು
- ವಿಧಿವಿಜ್ಞಾನ ಮತ್ತು ಸೈಬರ್ ಅಪರಾಧ ಘಟಕಗಳು..CLICK HERE TO READ MORE